ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ಕಾಲೇಜುಗಳವರೆಗೆ ಇಂದು ರಜೆ ಘೋಷಣೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಯಾದ ಮಳೆಯಾಗುತ್ತಿದೆ. ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಅನುದಾನಿತ ಹಾಗೂ ಪಿಯುಸಿವರೆಗೆ ಇಂದು (ಜುಲೈ 15 ರಂದು) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.